ನೆಲ್ಯಾಡಿ ಸಮೀಪ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Chandrashekhara Kulamarva
0


ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಇಂದು (ಜೂ.16) ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.


ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು ನೆಲ್ಯಾಡಿ ಸಮೀಪ ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎ೦ದು ತಿಳಿದುಬಂದಿದೆ.


ಕಾರ್ಕಳದ ಪಡುಮನೆ ನಿವಾಸಿ ಶಂಕರನಾರಾಯಣ ಭಟ್‌ (41) ಈ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮೃತರಾಗಿದ್ದಾರೆ. ಈ ಪೈಕಿ ಐವರು ಗಂಭೀರ ಗಾಯಗೊಂಡಿದ್ದು ತಕ್ಷಣ 5 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ 4 ಮಂದಿಯನ್ನು ಇಂಡಿಯಾನಾ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಇನ್ನು ಕೆಲವರನ್ನು ಆಂಬುಲೆನ್ಸ್‌ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.


ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top