ಡಾ ತಮಿಳ್ ಸೆಲ್ವಿ ರವರಿಗೆ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ

Chandrashekhara Kulamarva
0


ಬೆಂಗಳೂರು: ಬೆಂಗಳೂರಿನ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಮತ್ತು ಕಲಬುರ್ಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಪರಿಷತ್  ಕೃಷ್ಣರಾಜ  ಪರಿಷನ್ಮಂದಿರದಲ್ಲಿ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಪ್ರಕಟಣೆ ದೇವುಡು ಹೇಳಿದ ಮಕ್ಕಳ ಕಥೆಗಳು (ಸಂ. ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ) 5 ಮಕ್ಕಳ ಕೃತಿಗಳ ಲೋಕಾರ್ಪಣೆ ಯನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ ವೂಡೆ ಪಿ ಕೃಷ್ಣ ನೆರೆವೇರಿಸಿದರು.


ಚೆನ್ನೈ ನ ಮದರಸು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ ತಮಿಳ್ ಸೆಲ್ವಿ ರವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಡೋಜ ಡಾ ಕುಂ. ವೀರಭದ್ರಪ್ಪ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಕರ್ನಾಟಕ ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೋ ಮಲ್ಲೇಪುರಂ ಜಿ ವೆಂಕಟೇಶ್, ಲೇಖಕಿ ಪ್ರತಿಭಾ ನಂದಕುಮಾರ್, ಸಾಹಿತಿ ಡಾ. ಕೆ ಜಿ ಲಕ್ಷ್ಮೀನಾರಾಯಣಪ್ಪ, ಪ್ರತಿಷ್ಠಾನದ ಅಧ್ಯಕ್ಷ ಡಾ ಹೆಚ್ ಟಿ ಪೋತೆ, ಶ್ರೀಶೈಲ ನಾಗರಾಳ, ಪ್ರಕಾಶಕ ಬಿ ಕೆ ಸುರೇಶ ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top