ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವೇದಗಣಿತ ಕಾರ್ಯಾಗಾರ

Chandrashekhara Kulamarva
0

 


ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. 


ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ ಸ್ಥಾಪಕ ವೇದಗಣಿತದ ಸಂಪನ್ಮೂಲ ವ್ಯಕ್ತಿಗಳಾದ ನವೀನ್ ಇವರು ಗಣಿತದಲ್ಲಿ  ಮಕ್ಕಳು ಎದುರಿಸುವ ಸಮಸ್ಯೆಯನ್ನು ಗುರುತಿಸಿ ಕಲಿಕೆಯನ್ನು ಸುಲಭಗೊಳಿಸುವ ಸಲುವಾಗಿ ನಂಬರ್ ಎಜುಕೇಶನಲ್ ಸೊಲ್ಯೂಷನ್  ಸಂಸ್ಥೆಯನ್ನು ಆರಂಭಿಸಲಾಯಿತು ಎಂದರು.


ವೇದಿಕೆಯಲ್ಲಿ ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ ಸಹಸ್ಥಾಪಕ ಭರತ್, ಸದಸ್ಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ ಸ್ವಾಗತಿಸಿ, ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ವಂದಿಸಿದರು. ಶಿಕ್ಷಕಿ ವಿದ್ಯಾಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ತರಬೇತಿ ಕಾರ್ಯಗಾರ ಮುಂದುವರೆಯಿತು.



إرسال تعليق

0 تعليقات
إرسال تعليق (0)
To Top