ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅನುದೀಪ್ ಪಿ, ಕೀರ್ತಿವರ್ಧನ್ ಎಮ್, ಆಶಿಶ್ ಎಸ್ ಜಿ, ಚಿನ್ಮಯ ಕೃಷ್ಣ ವರ್ಮ ಹಾಗೂ ಶ್ರೀರಕ್ಷಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು.
ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್‌ರೈ ಎಂ ಉಪಸ್ಥಿತರಿದ್ದರು. ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ ಶಾಸ್ತ್ರಿ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
