ವಿವೇಕಾನಂದ PU ಕಾಲೇಜಿನಲ್ಲಿ ವಿವೇಕ ಮುನ್ನುಡಿ-2025

Upayuktha
0



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2025-26 ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ವಿವೇಕ ಮುನ್ನುಡಿ-2025 ನ್ನು  ದಿನಾಂಕ 26 ಜೂನ್‌ 2025ರ ಗುರುವಾರ, ಅಪರಾಹ್ನ 1:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. 


ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಾರ್ಯಕ್ರಮವು ನಡೆಯಲಿದ್ದು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ. ಭರತ್‌ ಶೆಟ್ಟಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷರಾದ ರವೀಂದ್ರ ಪಿ.  ಅವರು ವಹಿಸಲಿದ್ದಾರೆ. 


ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಎಂ. ಗೋಪಾಲಕೃಷ್ಣ ಭಟ್‌, ಪ್ರಾಂಶುಪಾಲರಾದ ದೇವಿಚರಣ್‌ ರೈ ಎಂ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ವಿಶ್ವನಾಥ್‌ ಕೆ., ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ವಿವಿಧ ತರಗತಿಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 


ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭವಿಷ್ ಜಿ. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಬಿಂದು ಕೆ. ಜೆ. ಹಾಗೂ ಜೊತೆ ಕಾರ್ಯದರ್ಶಿಯಾಗಿ ಗ್ರೀಷ್ಮಾ ಎಸ್. ಎ. ಚುನಾಯಿತರಾಗಿದ್ದರು. ಕ್ರೀಡಾ ಕಾರ್ಯದರ್ಶಿಯಾಗಿ ಸಾತ್ವಿಕ್ ಆರ್. ಹಾಗೂ ಜೊತೆ ಕಾರ್ಯದರ್ಶಿಯಾಗಿ ಸಮೃಧ್ಧಿ ಜೆ. ಶೆಟ್ಟಿ ಆಯ್ಕೆಯಾಗಿದ್ದರು. 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top