ಎಸ್.ಡಿ.ಎಂ. ಬಿ.ಎಡ್ ಉಜಿರೆ: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

Chandrashekhara Kulamarva
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು (ಜೂ.4) ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನ ರವರು ಮೈಸೂರು ಪ್ರಾಂತ್ಯ ಎಂದರೆ ಅದು ಸಮಾಜ ಸೇವೆಗೆ ಸಿದ್ಧ ಎನ್ನುವಂತಿತ್ತು. ಪ್ರತಿಯೊಂದು ಕ್ಷೇತ್ರದಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ನೀಡಿದ ಕೊಡುಗೆ ಅನನ್ಯವಾದದ್ದು ಎಂದು ತಿಳಿಸಿದರು.


ಕಾಲೇಜಿನ ಉಪನ್ಯಾಸಕ ಮಂಜು ಆರ್ ರವರು ಆಡು ಮುಟ್ಟದ ಸೊಪ್ಪಿಲ್ಲ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಸೇವೆ ಸಲ್ಲಿಸದ ಕ್ಷೇತ್ರವಿಲ್ಲ ಎನ್ನುತ್ತಾ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಪರಿಚಯ, ಇತಿಹಾಸ ಮತ್ತು ಬಹುಮುಖ ಸಾಧನೆಗಳ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ, ವಿದ್ಯಾಶ್ರಿ ಪಿ, ಆದ್ಯಾ ಯು, ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ವಿನುತ ಕೆ ಒ ಮತ್ತು ವರ್ಷ ಪಿ ಆರ್ ರವರು ಪ್ರಾಸಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಶಶಿಕಲಾ ಸ್ವಾಗತಿಸಿ, ನಿಖಿತಾ ವಂದಿಸಿ, ರಶ್ಮಿ ಕೆ ಪಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top