ಗೋವಿಂದ ದಾಸ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ 500ನೇ ಸಂಸ್ಮರಣಾ ಕಾರ್ಯಕ್ರಮ

Upayuktha
0



ಸುರತ್ಕಲ್‍: ಸ್ತ್ರೀಯರು ನಾಲ್ಕು ಗೋಡೆಗಳ ನಡುವೆ ಗೃಹಕೃತ್ಯಗಳನ್ನು ನಿಭಾಯಿಸುತ್ತಿದ್ದ ಕಾಲಘಟ್ಟದಲ್ಲಿ ರಾಷ್ಟ್ರಪ್ರೇಮಕ್ಕಾಗಿ ತನ್ನೆಲ್ಲ ಸ್ವ ಇಚ್ಛೆಗಳನ್ನು ಬದಿಗಿಟ್ಟು ಪೋರ್ಚುಗೀಸರ ವಿರುದ್ಧ ಹೋರಾಡಿದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರಮಹಿಳೆ ರಾಣಿ ಅಬ್ಬಕ್ಕ ಎಂದು ಎಂ.ಆರ್.ಪಿ.ಎಲ್.ನ ನಿವೃತ್ತ ಮಹಾಪ್ರಬಂಧಕಿ ವೀಣಾ ಟಿ. ಶೆಟ್ಟಿ ನುಡಿದರು.


ಅವರು ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಮತ್ತು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‍ ಜಂಟಿಯಾಗಿ ಆಯೋಜಿಸಿದ್ದ ರಾಣಿ ಅಬ್ಬಕ್ಕನವರ 500ನೇ ಸಂಸ್ಮರಣಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮ ಉದ್ಘಾಟಿಸಿದ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಭಟ್‍ಎಸ್.ಜಿ. ಮಾತನಾಡಿ, ಇತಿಹಾಸವನ್ನು ಓದುವುದರ ಮೂಲಕ ಚಿರಾಯುಗಳಾಗಿ ನಮ್ಮೊಂದಿಗಿರುವ ದೇಶಕ್ಕಾಗಿತಮ್ಮ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಹರೀಶ ಅಚಾರ್ಯ ಮಾತನಾಡಿ, ಕಡಲ ತಡಿಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕಳ ಜೀವನ ಚರಿತ್ರೆಯು ಎಲ್ಲಾ ವರ್ಗದ ಮಹಿಳೆಯರಿಗೆ ಪ್ರೇರಣೆಯಾಗಿದೆ ಎಂದರು.


ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಸ್ಟಾಫ್ ಸೆಕ್ರಟರಿ ಗೀತಾ ಕೆ., ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ  ಕಾರ್ಯದರ್ಶಿ ರಾಜೇಶ್‍ ಕುಮಾರ್, ಕಾರ್ಯಕಾರಿಣಿ ಸದಸ್ಯೆ ಆಶಾಲತಾ, ಕಾಲೇಜಿನ ಉಪನ್ಯಾಸಕ ಮತ್ತು ಆಡಳಿತಾತ್ಮಕ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಇತಿಹಾಸ ವಿಭಾಗದ ಮುಖ್ಯಸ್ಥೆ. ಡಾ. ವಿಜಯಲಕ್ಷ್ಮೀ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಮೇಜರ್ ಡಾ. ಸುಧಾ ಯು.ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top