ಅರೆಕಾಲಿಕ ಶಿಕ್ಷಕರ ನೇಮಕಾತಿ: ಅರ್ಜಿ ಆಹ್ವಾನ

Chandrashekhara Kulamarva
0

  


ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇಂಗ್ಲಿಷ್ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಮತ್ತು ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574946 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top