ಜೂ.26ರಂದು ರೆಡ್‌ಕ್ರಾಸ್‌ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Chandrashekhara Kulamarva
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.


ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರೊ.ಡಾ.ಅರುಣ ಯಡಿಯಾಳ್, ಲೋಕಾಯುಕ್ತ ಡಿಎಸ್‌ಪಿ ಡಾ. ಗಾನ.ಪಿ.ಕುಮಾರ್, ರಾಮಕೃಷ್ಣ ಕಾಲೇಜಿನ ಸಂಚಾಲಕ ಡಾ.ಸಂಜೀವ ರೈ, ಪ್ರಾಂಶುಪಾಲೆ ಡಾ.ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top