ಕುಳಾಯಿ: ಶಾಲಾ ಪ್ರಾರಂಭೋತ್ಸವ, ಸಮವಸ್ತ್ರ-ಪಠ್ಯಪುಸ್ತಕ ವಿತರಣೆ

Chandrashekhara Kulamarva
0


ಕುಳಾಯಿ (ಮಂಗಳೂರು): ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಲಭ್ಯವಾಗುತ್ತಿದ್ದು ಪೋಷಕರು ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಸೇರ್ಪಡೆಗೊಳಿಸಬೇಕು ಎಂದು ಹಿರಿಯ ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ನುಡಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ಫಿಶರಿಸ್ ಚಿತ್ರಾಪುರ ಕುಳಾಯಿಯಲ್ಲಿ ನಡೆದ ಶಾಲಾ ಪ್ರಾರಂಭ ಉತ್ಸವ ಹಾಗೂ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.


ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್ ಹಾಗೂ ಸದಸ್ಯ ತೇಜಪಾಲ್ ಕೂಳೂರು ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ, ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡು ಕ್ರಿಯಾಶೀಲ ಶಿಕ್ಷಣ ಕ್ರಮ ಅಗತ್ಯವಾಗಿದ್ದು ಹಳೆ ವಿದ್ಯಾರ್ಥಿ ಸಂಘ ವಿದ್ಯಾರ್ಥಿಗಳ ಅಭಿವೃದ್ದಿಗೆ ಸದಾ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದರು.


ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳಾ, ಶ್ರೀನಿವಾಸ ರಾವ್, ಶಿಕ್ಷಕಿ ನೀತಾ ತಂತ್ರಿ, ರೂಪ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಶಿಕ್ಷಕಿ ಸುಕೇಶಿನಿ ವಂದಿಸಿದರು. ಜೆಸಿಂತಾ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.


ತಳಿರು ತೋರಣಗಳಿಂದ ಸಿಂಗರಿಸಿದ ಶಾಲಾ ಆವರಣದಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಒಂದನೇ ತರಗತಿಯ ಮಕ್ಕಳನ್ನು ಸಡಗರದಿಂದ ಸ್ವಾಗತಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top