ಬಂಡಿತ್ತಡ್ಕ ಸರ್ಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ

Upayuktha
0

ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗೆ ಉಚಿತ ಪರಿಕರಗಳ ವಿತರಣೆ



ಕನ್ಯಾನ: ಕನ್ಯಾನದ ಬಂಡಿತ್ತಡ್ಕದಲ್ಲಿರುವ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ - ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಕಾರ್ಯಕ್ರಮ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಭಾನುವಾರ ನಡೆಯಿತು. 


ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಬ್ಯಾಗ್, ಕೊಡೆ, ಪೆನ್, ಪೆನ್ಸಿಲ್, ಸ್ಕೇಲ್, ರಬ್ಬರ್ ಗಳನ್ನು ವಿತರಿಸಲಾಯಿತು. ಹಾಗೂ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳ ಖಾತೆಯಲ್ಲಿ ಒಂದು ಸಾವಿರ ರೂಪಾಯಿ ಠೇವಣಿ ಇಡಲಾಗುವುದು ಎಂದು ತೀರ್ಮಾನಿಸಲಾಯಿತು. 


ಈ ಸಂದರ್ಭದಲ್ಲಿ ಮಾತನಾಡಿದ ಹಳೆವಿದ್ಯಾರ್ಥಿ ಸಂಘದ  ಅಧ್ಯಕ್ಷ ಇಸ್ಮಾಯಿಲ್ ಕುಕ್ಕಾಜೆ,  ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣವಾಗಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಬೇಕೆಂದು ಕರೆನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ಯಾನ ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮಾತನಾಡಿ ಶಾಲಾ ದಾಖಲಾತಿ ಹೆಚ್ಚಿಸುವಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೀಡುವ ಕೊಡುಗೆಗಳ ಬಗ್ಗೆ ಶ್ಲಾಘಿಸಿದರು ಹಾಗೂ ಶಾಲೆಯು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೃಷ್ಣ ಕುಮಾರ್ ಕಮ್ಮಾಜೆ ಶುಭ ಹಾರೈಸಿದರು. 


ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷೆ ಕಮರುನ್ನೀಸ, ಉಪಾಧ್ಯಕ್ಷೆ ಭುವನೇಶ್ವರಿ, ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.


ಪ್ರಭಾರ ಮುಖ್ಯ ಶಿಕ್ಷಕಿ ಸೆಕೀನಾ ಸ್ವಾಗತಿಸಿದರು. ಶಿಕ್ಷಕಿ ವನಿತ ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top