ರಂಗವಲ್ಲಿಯ ಮೂಲಕ ವಿದ್ಯಾರ್ಥಿಗಳಿಂದ ಕಾರಂತರ ಚಿತ್ರಣ

Upayuktha
0



ಉಡುಪಿ:  ಡಾ. ಶಿವರಾಮ ಕಾರಂತ ಟ್ರಸ್ಟ್  ವತಿಯಿಂದ ಸಂಜಯಗಾಂಧಿ ಪ್ರೌಢಶಾಲೆ ಅಂಪಾರು ಇವರ ಸಹಯೋಗದಲ್ಲಿ  ಮಕ್ಕಳಿಗಾಗಿ ಕಾರಂತರು -1 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ  ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮದಲ್ಲಿ ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ಅವರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಾರಂತರ ಬಾಲಪ್ರಪಂಚ, ಪ್ರಾಣಿ ಪ್ರಪಂಚ, ಪಕ್ಷಿಗಳ ಅದ್ಭುತ ಲೋಕ ಪುಸ್ತಕದಲ್ಲಿರುವ ಚಿತ್ರಗಳನ್ನು ರಂಗವಲ್ಲಿಯಲ್ಲಿ ಬಿಡಿಸುವ ವಿಶಿಷ್ಟ ಕಾರ್ಯಕ್ರಮವು ಇಂದು ನಡೆಯಿತು. 


ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ, ಡಾ.ಶಿವರಾಮ ಕಾರಂತರು ಮಕ್ಕಳ ಕುರಿತು ವಿಶೇಷ ಪ್ರೀತಿ ಹೊಂದಿದವರು. ಮಕ್ಕಳು ಪ್ರಾಯೋಗಿಕ ಹಾಗೂ ಸೈದ್ಧಾಂತಿಕವಾಗಿ ಎರಡು ರೀತಿಯಲ್ಲಿ ಕಲಿಯಬೇಕು ಎಂಬ ಅವರ ಕಾಳಜಿಯನ್ನು ಬರವಣಿಗೆಯಲ್ಲಿ ಕಾಣಬಹುದಾಗಿದೆ. ರಂಗವಲ್ಲಿಯನ್ನು ಕೇಂದ್ರವಾಗಿಟ್ಟುಕೊಂಡು ಕಾರಂತರ ಕಾದಂಬರಿಗಳಲ್ಲಿ ಕಂಡುಬರುವ ಚಿತ್ರಗಳನ್ನು ಬರೆಯುವ ಮೂಲಕ ಕಾರಂತರನ್ನು  ವಿದ್ಯಾರ್ಥಿಗಳಿಗೆ ವಿಶಿಷ್ಟವಾಗಿ ಪರಿಚಯಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಶೆಟ್ಟಿ ಎಕ್ಕಾರು, ವಿದ್ಯಾರ್ಥಿಗಳು ಪಠ್ಯದೊಂದಿಗೆ  ಪಠ್ಯ ಪೂರಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ, ಕೌಶಲ್ಯ ವೃದ್ಧಿ ಸಾಧ್ಯ, ಪುಸ್ತಕ ಓದುವ ಹವ್ಯಾಸ ಬದುಕಿನ ಬರವಣಿಗೆ ಭಾಷೆ ಮತ್ತು ಮಾತನಾಡುವ ಭಾಷೆಯ ಬೆಳವಣಿಗೆಯಲ್ಲಿ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.


ಸಾಹಿತ್ಯ ಲೋಕಕ್ಕೆ ಕಾರಂತರ ಕೊಡುಗೆ ಅಪಾರವಾಗಿದ್ದು, ಅವರ ವಿಚಾರಧಾರೆಯನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಸಹಕಾರಿ ಧುರೀಣ ಕಿರಣ್ ಹೆಗ್ಡೆ ಹೇಳಿದರು. ಅಂಪಾರು ಸಂಜಯಗಾಂಧಿ ಪ್ರೌಢಶಾಲಾ ಸಮಿತಿ ಫಂಡ್‌ನ ಅಧ್ಯಕ್ಷೆ  ಶಾರದ ಕಾರ್ಯಕ್ರಮವನ್ನು  ಉದ್ಘಾಟಿಸಿದರು. 


ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ್, ನಿವೃತ್ತ ದೈಹಿಕ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಶಿಕ್ಷಕಿ ಗೀತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಉದಯಕುಮಾರ ಬಿ ಸ್ವಾಗತಿಸಿ,  ಕಾವ್ಯ ನಿರೂಪಿಸಿ, ಸವಿತಾ ವಂದಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top