ಉಜಿರೆ ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಪರಿಸರ ದಿನಾಚರಣೆ, 'ಸಿಂದೂರ ವನ' ನಿರ್ಮಾಣ

Upayuktha
0


ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನವನ್ನು 'ಸಿಂದೂರ ವನ' ನಿರ್ಮಿಸಿ ಗಿಡ ನೆಡುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು.


ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಮಾತನಾಡಿ "ಪ್ಲಾಸ್ಟಿಕ್  ಬಳಕೆಯಿಂದ ಪರಿಸರ ಮಾಲಿನ್ಯ ಉಂಟಾಗುವುದು. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಉಳಿಸುವ ಪ್ರತಿಜ್ಞೆ ಕೈಗೊಳ್ಳಬೇಕು ಹಾಗೂ ಪರಿಸರ ದಿನದಂದು ಗಿಡ ನೆಡುವುದರ ಜೊತೆಗೆ ಅದನ್ನು ಪೋಷಣೆ ಮಾಡುವುದು ಕೂಡ ನಮ್ಮ ಕರ್ತವ್ಯ"ಎಂದು ಹೇಳಿದರು.


ಜಾಗತಿಕ ಮಟ್ಟದಲ್ಲಿ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟುವ ಧ್ಯೇಯದಂತೆ ಉಜಿರೆ ಕಾಲೇಜು ರಸ್ತೆ ಹಾಗೂ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮಾಡಲಾಯಿತು.


ಕಾಲೇಜಿನ ಎನ್ಎಸ್ಎಸ್ ನಿಕಟ ಪೂರ್ವ ಯೋಜನಾಧಿಕಾರಿ ಡಾ. ಪ್ರಸನ್ನ ಕುಮಾರ್ ಐತಾಳ್, ಎನ್ಎಸ್ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು. ಎನ್ಎಸ್ಎಸ್ ನಾಯಕಿ ರಾಶಿಕ ಮತ್ತು ನಾಯಕ ಸಂಕೇತ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top