ಆಳ್ವಾಸ್: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

Upayuktha
0



ವಿದ್ಯಾಗಿರಿ: ಆಳ್ವಾಸ್ PU ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ‘ವಿಶ್ವ ತಂಬಾಕು ರಹಿತ ದಿನದ’ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿ ಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು.


ಕಾರ್ಯಕ್ರಮದಲ್ಲಿ ಮಾತನಾಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ.  ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ.  ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. 


ಮಕ್ಕಳ  ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ.  ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು.  ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು ಅಥವಾ 1 ವರ್ಷ ಜೈಲು ಶಿಕ್ಷೆ, ಮತ್ತೆ ಅದು ಪುನರಾವರ್ತನೆಯಾದರೆ 5 ವರ್ಷ ಜೈಲು 1 ಲಕ್ಷ ದಂಡವನ್ನು ವಿಧಿಸಲಾಗುತ್ತದೆ.  ಕರ್ನಾಟಕ ಪೊಲೀಸ್ ಇಂದು  ನವಮಾಧ್ಯಮವನ್ನು ಬಳಸಿ ಅಪರಾಧಿಗಳನ್ನು ಸುಲಭದಲ್ಲಿ  ಪತ್ತೆಹಚ್ಚಬಲ್ಲರು ಎಂದು ತಿಳಿಸಿದರು.  


 ಪೋಲೀಸ್ ಉಪನಿರೀಕ್ಷಕಿ ಪ್ರತಿಭಾ ಮಾತನಾಡಿ, ಭಾರತದಲ್ಲಿ  ಸೈಬರ್ ಕ್ರೆöÊಮ್‌ನಿಂದಾಗಿ ಜನರು ಒಂದು ನಿಮಿಷಕ್ಕೆ 1.30 ಲಕ್ಷದಿಂದ 1.50 ಲಕ್ಷದ ವರೆಗೆ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.  ಸೈಬರ್ ಕ್ರೆöÊಮ್‌ಗಳಲ್ಲಿ ಇನ್ವೆಸ್ಟ್ ಮೆಂಟ್ ಫ್ರಾಡ್, ಜಾಬ್ ಆಫರ್ ಫ್ರಾಡ್ , ಓಟಿಟಿ ಫ್ರಾಡ್, ಮನಿಲೋನ್ ಆ್ಯಪ್ ಫ್ರಾಡ್ ಮುಖ್ಯವಾದುವು.  ನಮ್ಮ ವಯಕ್ತಿಕ ಮಾಹಿತಿಗಳನ್ನು ಗುಪ್ತವಾಗಿಡಲು ವಾಟ್ಸಪ್ಪ್ನ ಎರಡು ಹಂತದ  ಪರಿಶೀಲನೆಗೆ ಒಳಪಡಿಸುವುದು  ಉತ್ತಮ ಎಂದರು.

ಪದವಿ ಪೂರ್ವ ಕಾಲೇಜಿನ ಮುಖ್ಯ ಆಪ್ತ ಸಮಾಲೋಚಕಿ  ರೇನಿಟಾ ಡಿಸೋಜಾ ವಿದ್ಯಾರ್ಥಿಗಳಿಗೆ ಜಾಗೃತಿ ಕರ‍್ಯಗಾರ ನಡೆಸಿಕೊಟ್ಟರು.  

ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಝಾನ್ಸಿ ಪಿ. ಎನ್, ಕಲಾ ನಿಖಾಯದ ಡೀನ್ ವೇಣುಗೋಪಾಲ್ ಶೆಟ್ಟಿ, ಸಂಸ್ಥೆಯ ನಿಲಯ ಪಾಲಕರು ಹಾಗೂ ಕ್ಷೇಮಪಾಲಕರು ಇದ್ದರು.  ಉಪನ್ಯಾಸಕ ಶಿವಪ್ರಸಾದ ಬಿವಿ ನಿರೂಪಿಸಿ, ಅರುಣ್‌ಕುಮಾರ್ ಸ್ವಾಗತಿಸಿ, ಬಬಿತಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top