ಹೆಣ್ಣು ಅಬಲೆಯಲ್ಲ ಸಮರ್ಥಳು: ಡಾ. ಮೀನಾಕ್ಷಿ ರಾಮಚಂದ್ರ

Chandrashekhara Kulamarva
0

ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಬ್ಬಕ್ಕ@500 ಉಪನ್ಯಾಸ ಸರಣಿ





ಮಂಗಳೂರು: ನಗರದ ಕುದ್ರೋಳಿಯ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಬ್ಬಕ್ಕ@500 ಉಪನ್ಯಾಸ ಸರಣಿಯ 6ನೇ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಇಂದು (ಜೂ.4) ನಡೆಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಪ್ರಾಧ್ಯಾಪಕರು ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಇದರ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ ಮಾತನಾಡಿ, ಉಳ್ಳಾಲದ ರಾಣಿ ಅಬ್ಬಕ್ಕನ ಬಗ್ಗೆ, ಚೌಟ ಮನೆತನದ ಬಗ್ಗೆ ಮತ್ತು ಅಬ್ಬಕ್ಕನ ಅಸಾಧಾರಣ ಆಡಳಿತ ವೈಖರಿಯನ್ನು ಕುರಿತು ಹೆಣ್ಣು ಅಬಲೆ ಅಲ್ಲ ಸಮರ್ಥಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸೌಮ್ಯ ಶೆಟ್ಟಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ರೀಮಂಗಳ ಉಪಸ್ಥಿತರಿದ್ದರು. ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ಆಶಾಲತಾ  ಪ್ರಾಸ್ತಾವಿಕ ನುಡಿಯನ್ನಾಡಿದರು. ಉಪನ್ಯಾಸಕಿ ಶಾರದಾ ಕಾರ್ಯಕ್ರಮ ನಿರೂಪಿಸಿದರು ಮತ್ತು ವೇದಿಕೆಯಲ್ಲಿ ಆಸೀನರಾದ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಲಾವಣ್ಯ ಅತಿಥಿಗಳಿಗೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top