ಜನತಾ ವಿದ್ಯಾಸಂಸ್ಥೆಗಳು ಅಡ್ಯನಡ್ಕ: ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಉಪನ್ಯಾಸ

Chandrashekhara Kulamarva
0





ಅಡ್ಯನಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ) ವತಿಯಿಂದ ಅಡ್ಯನಡ್ಕ ಜನತಾ ಪ್ರೌಢಶಾಲೆ ಮತ್ತು ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಜೂನ್ 4ರಂದು ನಡೆಯಿತು.


ಸಂಪನ್ಮೂಲ ವ್ಯಕ್ತಿ ರೇಣುಕಾ ಕಣಿಯೂರು ಅವರು ಮಾತನಾಡಿ, ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿ ಅರಿವು ಮೂಡಿಸಿಕೊಳ್ಳಬೇಕು ಎಂದು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಅಧ್ಯಕ್ಷ ಪುಷ್ಪಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಅಡ್ಯನಡ್ಕ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣ್ಯರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.


ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಡ್ಯನಡ್ಕ ಘಟಕದ ಸೇವಾ ಪ್ರತಿನಿಧಿ ಗಾಯತ್ರಿ ಎಸ್. ಸ್ವಾಗತಿಸಿದರು. ಕೇಪು ವಲಯ ಮೇಲ್ವಿಚಾರಕರಾದ ಚಂದ್ರಶೇಖರ್ ಯು.ಎ. ಪ್ರಸ್ತಾವನೆಗೈದರು. ಬೋಧಕ ವೃಂದದ ರವಿಕುಮಾರ್ ಎಸ್. ಆರ್. ಹಾಗೂ ಕುಸುಮಾವತಿ ಅವರು ಪುಷ್ಪ ನೀಡಿ ಸ್ವಾಗತಿಸಿದರು. ಕನ್ನಡ ಅಧ್ಯಾಪಕರಾದ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿ, ಹಿರಿಯ ಶಿಕ್ಷಕ ರಾಜಗೋಪಾಲ ಜೋಶಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top