ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

Upayuktha
0


ಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ವರ್ಷ) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.


ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು. ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಫೇಸ್‌ಬುಕ್‌ನಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top