ಚಿತ್ರಾಪುರ ಕುಳಾಯಿ- ಫಿಶರೀಶ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Chandrashekhara Kulamarva
0


ಸುರತ್ಕಲ್‌: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ದೀಪ ಬೆಳಗಿಸಿ ಉದ್ಘಾಟನೆ ನಡೆಸಿ ವಿಶ್ವ ಜ್ಞಾನ ಪರಂಪರೆಗೆ ಯೋಗ ವಿದ್ಯೆ ಭಾರತದ ಕೊಡುಗೆಯಾಗಿದ್ದು ಯೋಗ ಜೀವನ ಕ್ರಮವಾಗಿದೆ ಎಂದರು.


ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಗುರು ತೇಜಪಾಲ್ ಪುತ್ರನ್ ಮಾತನಾಡಿ, ಶಾರೀರಕ ಮತ್ತು ಮಾನಸಿಕ ಕ್ಷಮತೆಗೆ ಯೋಗ ಅತೀ ಅಗತ್ಯ ಎಂದರು.


ಯೋಗ ಶಿಕ್ಷಕಿ ತನುಜಾ ಸುಭೋದ್ ಯೋಗ ತರಬೇತಿ ನೀಡಿ ನಿರಂತರ ಯೋಗ ಶಿಕ್ಷಣದಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹಾಗೂ ಏಕಾಗ್ರತೆ  ಹೆಚ್ಚುತ್ತದೆ ಎಂದರು.


ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿ ಜೇಸಿಂತ, ನೀತಾ ತಂತ್ರಿ, ರೂಪ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top