ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ

Chandrashekhara Kulamarva
0


ಪುತ್ತೂರು: ಯಾರು ತನ್ನ ಪರಂಪರೆಯನ್ನು ಸಂಸ್ಕೃತಿಯನ್ನು ಮರೆಯುತ್ತಾನೋ ಅವನು ಔನ್ನತ್ಯವನ್ನು ಹೊಂದುವುದು ಅಸಾಧ್ಯ. ಭಾರತೀಯ ಜೀವನ ಪದ್ಧತಿ ಭಾರತೀಯ ತತ್ವಶಾಸ್ತ್ರದ ಮೇಲೆ ನಿಂತಿದೆ ಮಾತ್ರವಲ್ಲದೆ ಯೋಗವು ಆಧಾರ ಸ್ತಂಭದಂತೆ ತನ್ನ ಸ್ಥಾನವನ್ನು ಹೊಂದಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.


ಆರ್ಟ್ ಆಫ್ ಲಿವಿಂಗ್‍ನ ಕುಮಾರ ಸುಬ್ರಹ್ಮಣ್ಯ, ಶರಾವತಿ ರವಿ ನಾರಾಯಣ ಹಾಗೂ ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಎಂ ಸ್ವಾಗತಿಸಿ, ನಿರೂಪಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top