ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಕೆನರಾ ಪದವಿ ಪೂರ್ವ ಕಾಲೇಜ್ ಜಂಟಿ ಆಶ್ರಯದಲ್ಲಿ 108ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಕೆನರಾ ಪದವಿ ಕಾಲೇಜು ಸಭಾಂಗಣದಲ್ಲಿ ಜುಲೈ 4ರಂದು ನಡೆಯಿತು. ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಕೆ.ಎಂ. ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಸಂಘದ ಉದ್ಘಾಟನೆ ನಡೆಯಿತು.
ಸಾಹಿತ್ಯ ಅಭಿರುಚಿ ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ಅತಿಥಿಯಾಗಿ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕರಾದ ಬಿ. ರವೀಂದ್ರ ಶೆಟ್ಟಿ ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕಿ, ಲೇಖಕಿ ಸುಧಾ ನಾಗೇಶ್ ಉತ್ತಮ ಮಾರ್ಗದರ್ಶನ ಮಾಹಿತಿ ನೀಡಿದರು. ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾ ಮಹೇಶ್ವರಿ ಕೆ.ಬಿ ಸಾಹಿತ್ಯ ಸಂಘದ ಮುಖ್ಯಸ್ಥರಾದ ಮಧುಕೇಶ್ವರ ಶಾಸ್ತ್ರಿ ಹಾಗೂ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ ಗೌರವ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ