ಮಂಗಳೂರು: ಡಾ. ಮಾಲತಿ ಶೆಟ್ಟಿ, ಮಾಣೂರು ಸಂಪಾದಕತ್ವದ ಅಮೃತ ಪ್ರಕಾಶ ಪತ್ರಿಕೆಯ 12ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ಜುಲೈ 21ರಂದು ಸೋಮವಾರ ಸಮಯ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸುವರು.
ಅಮೃತ ಪ್ರಕಾಶ 12ನೇಯ ವರುಷದ ವಿಶೇಷ ಸಂಚಿಕೆ ಬಿಡುಗಡೆಯನ್ನು ಹೊಸದಿಗಂತ ಪತ್ರಿಕೆಯ ಸಂಪಾದಕರು ಹಾಗೂ ಮುಖ್ಯ ಕಾರ್ಯನಿರ್ವಾಧಿಕಾರಿ ಪಿ.ಎಸ್. ಪ್ರಕಾಶ್ ರವರು ಬಿಡುಗಡೆ ಮಾಡುವರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ರವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕ ಮಂಡಳಿ ಸದಸ್ಯರಾದ ಸತ್ಯ ಪ್ರಕಾಶ್ ಶೆಟ್ಟಿ, ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿರುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ