ಮಾಧ್ಯಮ ಪಟ್ಟಿಗೆ ಸೇರಿಸಿ: ಸಿಎಂಗೆ ಕರ್ನಾಟಕ ಕಮ್ಯುನಿಟಿ ರೇಡಿಯೊ ಅಸೋಸಿಯೇಶನ್ ಮನವಿ

Upayuktha
0


ಬೆಂಗಳೂರು: ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮಾನ್ಯತೆ ಮತ್ತು ವಯರ್ಲೆಸ್ ಆಪರೇಟಿಂಗ್ ಲೈಸನ್ಸ್ ಹೊಂದಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಕಾರ್ಯನಿರ್ವಹಿಸುತ್ತಿ ರುವ ಸಮುದಾಯ ಬಾನುಲಿ ಕೇಂದ್ರಗಳ ಪ್ರತಿನಿಧಿಗಳ ತಂಡ  ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿಯಾಗಿ ಸಮುದಾಯ ಬಾನುಲಿಗಳ ಕುರಿತು ವಿವರಿಸಿದರು.


ಈ ಸಂದರ್ಭ ಕರ್ನಾಟಕ ಕಮ್ಯುನಿಟಿ ರೇಡಿಯೊ ಅಸೋಸಿಯೇಶನ್ ನ ಅಧ್ಯಕ್ಷರಾದ ಡಾ. ರಶ್ಮಿ‌ಅಮ್ಮೆಂಬಳ (ರೇಡಿಯೊ ಮಣಿಪಾಲ್) ಸಮುದಾಯ ಬಾನುಲಿಗಳ ಪ್ರಸ್ತುತ ಸವಾಲುಗಳು, ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿ ತಳಮಟ್ಟದ ಸಮುದಾಯಗಳ ಧ್ವನಿಯಾಗಿರುವ ಸಮುದಾಯ ಬಾನುಲಿ ಕೇಂದ್ರಗಳು ಕಲೆ, ಸಂಸ್ಕೃತಿ, ಭಾಷೆಯನ್ನು ಸಂರಕ್ಷಿಸುವುದರ ಜೊತೆಗೆ ಶಿಕ್ಷಣ,ಕೃಷಿ, ಆರೋಗ್ಯ, ಪರಿಸರ, ಮಹಿಳಾ ಸಬಲೀಕರಣ ಹಾಗೂ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸುತ್ತಾ ಜನ ಸಾಮಾನ್ಯರನ್ನು ಪರಿಣಾಮಕಾರಿಯಾಗಿ ಮುಟ್ಟುವಂತಾಗಿರುವು ದನ್ನು ಗಮನಕ್ಕೆ ತಂದರು.


ಸಮುದಾಯ ಬಾನುಲಿ ಕೇಂದ್ರಗಳು ಸರಕಾರದ ನಿಯಮಾವಳಿಗೆ ಅನುಗುಣವಾಗಿ ಸೀಮಿತ ಪ್ರಸಾರವ್ಯಾಪ್ತಿ ಹೊಂದಿವೆ. ರಾಷ್ಟ್ರದ ಮೂಲ ಘಟಕವಾದ ಸಮುದಾಯದ ಅಭಿವೃದ್ಧಿ ಆಶಯ ಹೊಂದಿರುವ ಸಮುದಾಯ ಬಾನುಲಿ ಕೇಂದ್ರಗಳು ಇತರ ರಾಷ್ಟ್ರೀಯ ಮಾಧ್ಯಮಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದರಿಂದ ಇವುಗಳಿಗೆ ಸರಕಾರದ ಉತ್ತೇಜನವೂ ಅಗತ್ಯವಿದೆ.


ಸರಕಾರವು ಜಾಹೀರಾತು ನೀತಿಯನ್ನು ಮರುಪರಿಶೀಲಿಸಿ ಸಮುದಾಯ ಬಾನುಲಿಗಳನ್ನು ಮಾಧ್ಯಮ ಪಟ್ಟಿಗೆ ಸೇರಿಸುವ ನಿರ್ಧಾರ ಕೈಗೊಂಡು ನ್ಯಾಯ ಒದಗಿಸಿಕೊಡಬೇಕಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಇವರಿಗೂ ಈ ಸಂಬಂಧ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.


ಕಮ್ಯುನಿಟಿ ರೇಡಿಯೊ ಅಸೋಸಿಯೇಶನ್ ದಕ್ಷಿಣ ವಲಯದ ಜಂಟಿ ನಿರ್ದೇಶಕರಾದ ಶಿವಶಂಕರ್ (ನಮ್ಮಧ್ವನಿ) ಮಾತನಾಡಿ ದೇಶದಾದ್ಯಂತ  ಸುಮಾರು ಐನೂರಮೂವತ್ತಕ್ಕಿಂತಲೂ ಹೆಚ್ಚು ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು  ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿವೆ ಎಂದರು.


ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದರು.


ಕರ್ನಾಟಕ ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್‌ನ ಸದಸ್ಯರಾದ ನಿಂಗರಾಜು ( ಜನಧ್ವನಿ), ವಿ.ಕೆ ಕಡಬ (ರೇಡಿಯೊ ನಿನಾದ), ಜ್ಯೋತಿ ಸಾಲಿಗ್ರಾಮ (ರೇಡಿಯೊ ಕುಂದಾಪುರ), ರೋಶನ್ (ರೇಡಿಯೊ ಸಾರಂಗ್) ಈ ಸಂದರ್ಭ ಉಪಸ್ಥಿತರಿದ್ದರು. ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top