ಶಾಲಾ ಶಿಕ್ಷಣದ ಜತೆಗೆ ಸಂಸ್ಕಾರ ಕೂಡಾ ಅಗತ್ಯ: ಹರೀಶ್ ಅಡ್ಯಾರ್

Chandrashekhara Kulamarva
0

ಅಭಾಸಾಪ- ರೋಟರಿ ಕ್ಲಬ್‌ ವತಿಯಿಂದ ಜ್ಞಾನ ಪ್ರಸರಣ ಮಾಲಿಕೆ ಕಾರ್ಯಕ್ರಮ




ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಮಂಗಳೂರು ತಾಲೂಕು ಸಮಿತಿ ವತಿಯಿಂದ ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಸಹಯೋಗದಲ್ಲಿ ಸಂಸ್ಕಾರ, ಸಂಸ್ಕೃತಿ ಜ್ಞಾನ ಪ್ರಸರಣ ಮಾಲಿಕೆ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಮತ್ತು ಪುಸ್ತಕಗಳ ಕೊಡುಗೆ ಕಾರ್ಯಕ್ರಮ ನಗರದ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಅಧ್ಯಕ್ಷ ಹರೀಶ್ ಅಡ್ಯಾರ್ ಮಾತನಾಡಿ ‘ಶಿಕ್ಷಣದ ಜತೆಗೆ ಸಂಸ್ಕಾರ ಕೂಡಾ ಅಗತ್ಯ. ಶಿಕ್ಷಣ ಜ್ಞಾನ ನೀಡಿದರೆ, ಒಳ್ಳೆಯ ಸಂಸ್ಕಾರ ವ್ಯಕ್ತಿಯನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸುತ್ತದೆ ಎಂದರು.


ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ನಿಖಿಲ್ ಸುವರ್ಣ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ ಡಿಸೋಜಾ, ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ಅಭಾಸಾಪ ಮಂಗಳೂರು ತಾಲೂಕು ಸಮಿತಿ ಉಪಾಧ್ಯಕ್ಷೆ ಚಂದ್ರಪ್ರಭಾ ದಿವಾಕರ್, ಜತೆ ಕಾರ್ಯದರ್ಶಿ ರವಿಕಲಾ ಸುಂದರ್, ರೋಟರಿ ಸದಸ್ಯರಾದ ಗೋಪಾಲಕೃಷ್ಣ ಶೆಟ್ಟಿ, ನಿತಿನ್ ಅತ್ತಾವರ, ಅಶೋಕ್ ಉಜ್ಜೋಡಿ, ಶಾಲಾ ಶಿಕ್ಷಕಿಯರಾದ ಶೋಭಾ.ಎಂ., ಜೆಸಿಂತಾ ಲೋಬೊ, ರಾಜೇಶ್ವರಿ ಪ್ರಭು, ನಮಿತಾ.ಬಿ., ಶಿವರಂಜನಿ, ಸುನೀತಾ, ಶೋಭಾ, ವಿನಯ ಉಪಸ್ಥಿತರಿದ್ದರು.


ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ ಸ್ವಾಗತಿಸಿ, ಕೋಶಾಧಿಕಾರಿ ಬೀನಾ ವಂದಿಸಿದರು. ಶಿಕ್ಷಕಿ ಮಮತಾ.ಎಸ್.ರಾವ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top