ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01-02 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ "ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ" ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ 500ಕ್ಕೂ ಅಧಿಕ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಶಾಸಕರು, ನೀವು ಒಂದು ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾದರೆ ಮೊದಲು ಖುಷಿ ಪಡುವುದು ನಿಮ್ಮ ಹೆತ್ತವರು. ಆ ಕಾರಣಕ್ಕಾಗಿ ಆಳ್ವಾಸ್ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ಡಿಗ್ರಿ, ಡಿಪ್ಲೊಮ, ಇಂಜಿನಿಯರಿಂಗ್, ಐಟಿಐ, ಹೀಗೆ ವಿವಿಧ ವಿದ್ಯಾರ್ಹತೆಗೆ ಅನುಗುಣವಾಗಿ 5 ಸಾವಿರಕ್ಕೂ ಅಧಿಕ ಅವಕಾಶಗಳಿವೆ. ನಿಮ್ಮ ಅನುಕೂಲಕ್ಕಾಗಿ ಮಂಗಳೂರಿನಿಂದ ಬಸ್ ವ್ಯವಸ್ಥೆಯೂ ಸಹ ಇರಲಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಕಾರ್ಯಾಗಾರದಲ್ಲಿ ಉದ್ಯೋಗಾಕಾಂಕ್ಷಿ ಯುವ ಮಿತ್ರರಲ್ಲಿ ಹೊಸ ಭರವಸೆ ತುಂಬಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಆತ್ಮೀಯರಾಗಿರುವ ವಿವೇಕ್ ಆಳ್ವರು ಹಾಗೂ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ವಿಶೇಷ ಅಭಿನಂದನೆಗೆ ಅರ್ಹರು ಎಂದರು.
ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ, ಪ್ರಾಂಶುಪಾಲರಾದ ಜಯಕರ ಭಂಡಾರಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ