ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್ ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ ಜಿ ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬಾಲವರ್ಗ ಬಾಲಕರ ತಂಡದ ಸನ್ಮಯ್ ಎನ್, ಆರನೇ ತರಗತಿಯ ವಿದ್ಯಾರ್ಥಿಗಳಾದ ಸಂಹಿತ್ ಜೋಸ್ಸಿ ಲೋಬೋ , ಮಯೂರ್ ಎಸ್ ಮಯ್ಯ, ತ್ರಿನಯ್ ರೈ, ರತುಲ್ ಅದೈತ್ ಸಮಗ್ರ ಪ್ರಶಸ್ತಿ ಪಡೆದುಕೊಳ್ಳುವ ತಂಡವು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ