ಅಂಬಿಕಾ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ

Upayuktha
0



ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್ ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ ಜಿ ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. 


ಬಾಲವರ್ಗ ಬಾಲಕರ ತಂಡದ ಸನ್ಮಯ್ ಎನ್, ಆರನೇ ತರಗತಿಯ ವಿದ್ಯಾರ್ಥಿಗಳಾದ ಸಂಹಿತ್ ಜೋಸ್ಸಿ ಲೋಬೋ , ಮಯೂರ್ ಎಸ್  ಮಯ್ಯ, ತ್ರಿನಯ್ ರೈ, ರತುಲ್ ಅದೈತ್ ಸಮಗ್ರ ಪ್ರಶಸ್ತಿ ಪಡೆದುಕೊಳ್ಳುವ ತಂಡವು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.





إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top