ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ. ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಜಂಟಿ ಆಶ್ರಯದಲ್ಲಿ 110 ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಇಂದು ಪಾಂಡೇಶ್ವರ ಸರಕಾರಿ ಶಾಲೆಯಲ್ಲಿ ನಡೆಯಿತು.
ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಮುಖ್ಯೋಪಾಧ್ಯಾಯಿನಿ ಎಚ್.ಕೆ ಶಾಲಿನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ ಹಾಗೂ ವಾರ್ತಾಭಾರತಿ ದೈನಿಕ ಪತ್ರಿಕೆಯ ಚೀಪ್ ಬ್ಯೂರೋ ಪುಷ್ಪರಾಜ್ ಬಿ.ಎನ್., ಹಾಗೂ ಶಿಕ್ಷಕಿ ಮತ್ತು ಲೇಖಕಿ ಶ್ರೀಮತಿ ರೇಖಾ ಸುದೇಶ್ ರಾವ್, ನಿವೃತ್ತ ಶಿಕ್ಷಕಿ ಹಾಗೂ ಲೇಖಕಿ ಸುಧಾ ನಾಗೇಶ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು, ಶಿಕ್ಷಕಿ ಹಾಗೂ ಲೇಖಕಿ ಸುರೇಖಾ ಯಾಳವಾರ. ಉಪಸ್ಥಿತರಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ