ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಘೋಷಿಸಿದೆ. ಪ್ರತೀ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ಘಟಕವು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. ಅಂತೆಯೇ ಈ ಬಾರಿ ಶಿಕ್ಷಣ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಡಾ. ಎಚ್. ಎಸ್ ಬಲ್ಲಾಳ್ ಸಹ ಕುಲಾಧಿಪತಿಗಳು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಸಂವಿಧಾನ ತಜ್ಞರಾದ ಡಾ. ಅನಂತಕೃಷ್ಣ ಭಟ್ ವಿಶ್ರಾಂತ ಪ್ರಾಧ್ಯಾಪಕರು, ಮಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.
ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಅತ್ಯುತ್ತಮ ಶಿಕ್ಷಕ ಆಡಳಿತಗಾರರಾಗಿ ಡಾ. ಕುರಿಯನ್ ಪ್ರಾಂಶುಪಾಲರು ಆಳ್ವಾಸ್ ಕಾಲೇಜು ಮೂಡಬಿದ್ರೆ ಹಾಗೂ ಡಾ. ಪ್ರೇಮಲತಾ ವಿ ಪ್ರಾಂಶುಪಾಲರು, ಕೆನರಾ ಕಾಲೇಜು ಮಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.
ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಬಾರಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಪ್ರೊ. ಹರೀಶ್ ಜೋಶಿ, ಸ್ಕೂಲ್ ಆಫ್ ಎಕನಾಮಿಕ್ಸ್ ಮಣಿಪಾಲ್ ಯೂನಿವರ್ಸಿಟಿ ಹಾಗೂ ಡಾ. ಶಾಂತರಾಮ ರೈ ಸಿ ಪ್ರಾಂಶುಪಾಲರು ಎಜೆ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮಂಗಳೂರು ಅವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಡಾ ಸುಭಾಷಿಣಿ ಶ್ರೀವತ್ಸ, ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಹಾಗೂ ಡಾ. ರಾಜೇಂದ್ರ ಜಿ. ಶಂಕರ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಪ್ರೊ. ವಿಜಯಲತ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ 0ಕಾಲೇಜು ಮಡಿಕೇರಿ ಹಾಗೂ ಡಾ. ಯಶೋದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಉಡುಪಿ ಇವರನ್ನು ಆಯ್ಕೆ ಮಾಡಲಾಗಿದೆ.
ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಡಾ. ರಾಧಾಕೃಷ್ಣ ದೈಹಿಕ ಶಿಕ್ಷಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಹಾಗೂ ತಮ್ಮಯ್ಯ ಕಾವೇರಿ ಕಾಲೇಜು ವಿರಾಜಪೇಟೆ ಇವರನ್ನು ಆಯ್ಕೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ 2025ನೇ ಸಾಲಿನಲ್ಲಿ ಪಿಹೆಚ್ ಡಿ ಪದವಿ ಪಡೆದ ಸಂಶೋಧನಾರ್ಥಿಗಳನ್ನು ಸನ್ಮಾನಿಸಲಾಗುವುದು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ‘ಪ್ರೇರಣಾ ದಿವಸ್’ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ವಿದ್ಯಾಗಿರಿಯಲ್ಲಿ ನಡೆಸಲಾಗುವುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ