ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ 'ಆಟಿಡೊಂಜಿ ದಿನ'ವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ತುಳು ರಂಗಭೂಮಿ ಕಲಾವಿದ ವಿ ಎಸ್ ಶಶಿಧರ್ ದೇವಾಡಿಗ ನೆಲ್ಲಿಕಾರು ಅವರು ಆಗಮಿಸಿ ಆಟಿ ತಿಂಗಳ ವೈಜ್ಞಾನಿಕ ಹಿನ್ನಲೆ, ಮಹತ್ವ, ಹಾಗೂ ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಗೀತಾ ಮಾತನಾಡಿ ಹಿಂದಿನ ಕಾಲದ ಆಟಿ ತಿಂಗಳ ಕಷ್ಟದ ಜೀವನದ ನೆನಪುಗಳನ್ನು ಹಂಚಿಕೊಂಡರು.
ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಪದ್ಮನಾಭ ಬಿ ಕೆ ಸ್ವಾಗತಿಸಿದರು. ಇಂಗ್ಲಿಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಭೋಜನವು ಕಾರ್ಯಕ್ರಮದ ವಿಶೇಷವಾಗಿತ್ತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ