ಧಾರವಾಡದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಶುಭಾರಂಭ

Upayuktha
0


ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತೀ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ನೂತನ ಸಿರಿ ಮಿಲ್ಲೆಟ್ ಕೆಫೆ’ಯು  ಇಂದು (ಜುಲೈ 4) ಶುಭಾರಂಭಗೊಂಡಿತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಸಿರಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಪರಮ ಪೂಜ್ಯ  ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಿನೂತನವಾದ ಸಿರಿ ಮಿಲ್ಲೆಟ್ ಕೆಫೆಯ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ  ಡಾ| ನಿರಂಜನ್ ಕುಮಾರ್  ಮತ್ತು  ಕಾರ್ಯನಿರ್ವಾಹಕ ನಿರ್ದೇಶಕರಾದ ಪದ್ಮಲತಾ ನಿರಂಜನ್ ದಂಪತಿಗಳು ದೀಪ ಬೆಳಗಿಸಿ ಶುಭ ಹಾರೈಸಿದರು. 


ಈ ಸಂದರ್ಭದಲ್ಲಿ  ಧಾರವಾಡ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಜೀವಂಧರ್ ಕುಮಾರ್, ಹಣಕಾಸು ನಿರ್ದೇಶಕರಾದ ವಿ.ಜಿ.ಪ್ರಭು, ಧಾರವಾಡ ಎಸ್.ಡಿ.ಎಂ ಡೆಂಟಲ್ ಹಾಸ್ಪಿಟಲ್ ಪಿ.ಆರ್.ಒ ನಾಗ್ ಕುಮಾರ್, ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿ.ಸಿ.ಒ ಗಣೇಶ್ ಪ್ರಸಾದ್ ಎಸ್ ಕಾಮತ್, ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಸಿರಿ ಮಿಲ್ಲೆಟ್ ಕೆಫೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಪೂಜ್ಯರು ಯುವ ಪೀಳಿಗೆಗೆ ಆರೋಗ್ಯಕರವಾಗಿ ಜೀವಿಸಲು ಅವಶ್ಯಕವಾಗಿರುವ ಪೌಷ್ಟಿಕಾಂಶಯುಕ್ತ ಆಹಾರೋತ್ಪನ್ನಗಳು ದೊರೆಯಬೇಕು ಎನ್ನುವ ಉದ್ದೇಶದಿಂದ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯನ್ನು ಎಸ್.ಡಿ.ಎಂ ಆಸ್ಪತ್ರೆಯ ಆವರಣದಲ್ಲಿ ತೆರೆಯಲಾಗಿದೆ. ಇಲ್ಲಿ ಮಧುಮೇಹ, ಬೊಜ್ಜು ನಿವಾರಕ, ಉತ್ತಮ ಜೀರ್ಣಕ್ರಿಯೆಗೆ ಸಹಕಾರಿಯಾಗುವ ಹಾಗೂ ಹೃದಯ ಸಂಬಂಧಿ ಕಾಯಿಲೆಗಳನ್ನು ನಿಯಂತ್ರಿಸುವ ಸಿರಿಧಾನ್ಯ ಉತ್ಪನ್ನಗಳನ್ನು ಬಳಸಿ ಶುಚಿ-ರುಚಿಯಾದ ಆರೊಗ್ಯಕರವಾದ ಖಾದ್ಯಗಳನ್ನು ತಯಾರಿಸಿ ಗ್ರಾಹಕರಿಗೆ ನೀಡುವ ದೃಷ್ಟಿಯಿಂದ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯನ್ನು ಆರಂಭಿಸಿದ್ದೇವೆ ಎಂದರು.


ಅಲ್ಲದೆ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯಲ್ಲಿ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳಾದ ಮಿಲ್ಲೆಟ್ ಕುಕ್ಕೀಸ್, ಮಿಲ್ಲೆಟ್ ರಸ್ಕ್, ಡೋನಟ್, ರಿಬ್ಬನ್ ಪಕೋಡಾ, ನವಣೆ ಲಡ್ಡು, ಬೆಳಗ್ಗಿನ ಉಪಹಾರಕ್ಕೆ ಯೋಗ್ಯವಾಗಿರುವ ಬರಗು ದೋಸೆ, ಮಿಲ್ಲೆಟ್ ಉಪ್ಮ, ಪೋಹ, ವರ್ಮಸಲ್ಲಿ, ಮಧ್ಯಾಹ್ನದ ಭೋಜನಕ್ಕೆ ಸಿರಿಧಾನ್ಯಗಳ ಬಿಸಿಬೇಳೆ ಬಾತ್, ತಾಳಿಪಟ್ಟು, ದಾಲ್ ಕಿಚಡಿ, ಮಿಲ್ಲೆಟ್ ಮೊಸರನ್ನ, ಜೋಳ ರೋಟ್ಟಿ, ಸಂಜೆಗೆ ಸ್ನಾಕ್ಸ್ ಐಟಮ್ ಗಳಾದ ನ್ಯೂಟ್ರಿ ಅಟ್ಟ, ಆನಿಯನ್ ಪಕೋಡಾ, ವೆಜ್ ಸ್ಯಾಂಡ್ ವಿಚ್, ಜೋಳ ವಡ ಇತ್ಯಾದಿ ಉತ್ತಮ ಗುಣಮಟ್ಟವುಳ್ಳ ಬಿಸಿ ಬಿಸಿ ಖಾದ್ಯಗಳು ಅತೀ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಎಲ್ಲರೂ ಸಿರಿ ಮಿಲ್ಲೆಟ್ ಕೆಫೆಗೆ ಭೇಟಿ ನೀಡಿ, ಇಲ್ಲಿ ದೊರೆಯುವ ವಿವಿಧ ಮಿಲ್ಲೆಟ್ ಖಾದ್ಯಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶುಭ ಹಾರೈಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top