ಉಜಿರೆ: ಎಸ್.ಡಿ.ಎಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಳಾಲಿನ ಸರಕಾರಿ ಪ್ರೌಢ ಶಾಲೆಯ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಬ್ ಇನ್ ಕ್ಯಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಏಕದಳ ಹಾಗೂ ದ್ವಿದಳ ಸಸ್ಯದ ಕಾಂಡದ ಒಳ ರಚನೆಯನ್ನು, ಸಸ್ಯಗಳಲ್ಲಿ ಬಾಷ್ಪ ವಿಸರ್ಜನೆ ಕುರಿತಾದ ಪ್ರಯೋಗ, ಜಲವಾಸಿ ಸಸ್ಯಗಳ ಒಳ ರಚನೆಯನ್ನು ಸೂಕ್ಷ್ಮದರ್ಶಕದ ಸಹಾಯದಿಂದ ವಿವರಿಸಲಾಯಿತು. ಹಾಗೂ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವಾರು ಕುತೂಹಲಕಾರಿಯಾದ ಪ್ರಯೋಗಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.
ಈ ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯರಾದ ಮಂಜುಶ್ರೀ ಕೆ ಹಾಗೂ ಭವ್ಯ ಡಿ ನಾಯಕ್ ಇವರು ನಡೆಸಿಕೊಟ್ಟರು. ಶಾಲೆಯ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಹಾಗೂ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಕೋಕಿಲ ಇವರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಸುಮಾರು 80 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ