ಪುತ್ತೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿಎ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿಎ ಸ್ಟಡೀಸ್ ನ ಇಬ್ಬರು ವಿದ್ಯಾರ್ಥಿಗಳಾದ ಪೃಥ್ವೀಶ್ ಡಿ.ಎಸ್ ಹಾಗೂ ಪುಷ್ಕರಿಣಿ ಇವರು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಪೃಥ್ವೀಶ್ ಡಿ.ಎಸ್ ಇವರು ಪುತ್ತೂರು ಆರ್ಯಾಪು ಗ್ರಾಮದ ಶಿವರಾಜ್ ಡಿ.ಕೆ ಮತ್ತು ದೇವಿಕಾ ಡಿ.ಎಸ್ ದಂಪತಿಗಳ ಪುತ್ರ. ಪುಷ್ಕರಣಿ ಹೆಚ್.ಆರ್ ಇವರು ತುಮಕೂರು ಜಿಲ್ಲೆಯ ರಘು ಎಚ್.ಆರ್ ಹಾಗೂ ಪ್ರೇಮಾ ದಂಪತಿಗಳ ಪುತ್ರಿ. ಇವರು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವುದರ ಮೂಲಕ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ