ಮಂಗಳೂರಿಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದರಿಗೆ ಪ್ರಭಾಕರ ಪ್ರಭು ಕೃತಜ್ಞತೆ

Chandrashekhara Kulamarva
0



ಬಂಟ್ವಾಳ: ಪ್ರಧಾನಿಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜನಸಾಮಾನ್ಯರ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ನೀಡುತ್ತಿರುವ ನಿಟ್ಟಿನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನೂಕೂಲ ಮತ್ತು ಆರೋಗ್ಯ ಸೌಕರ್ಯವನ್ನು ಹೆಚ್ಚಿಸುವ ದೃಷ್ಟಿಯಲ್ಲಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಪ್ರಾರಂಭಿಸಲು ಮಂಜೂರಾತಿ ನೀಡಿ ರೂ.1.49 ಕೋಟಿ ಅನುದಾನ ಕಲ್ಪಿಸುವುದರೊಂದಿಗೆ ದಕ್ಷಿಣ ಕನ್ನಡ ಸೇರಿದಂತೆ ನೆರೆಯ 3-4 ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ವರದಾನವಾಗಲಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಒತ್ತಡ ತಂದು ಯೋಜನೆ ಮಂಜೂರುಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರಭಾಕರ ಪ್ರಭು  ಕೃತಜ್ಞತೆ ಸಲ್ಲಿಸಿದ್ದಾರೆ .


2025-26 ನೇ ಕೇಂದ್ರ ಬಜೆಟ್ ನಲ್ಲಿ ಮುಂದಿನ 3 ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಿದ ಪ್ರಕಾರ  ಪ್ರಥಮ ಹಂತದ ಪಟ್ಟಿಯಲ್ಲಿಯೇ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿಜೀ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಜೆ.ಪಿ ನಡ್ಡಾಜೀ ರವರಿಗೆ ಧನ್ಯವಾದ ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top