ಮಾಧ್ಯಮದ ಸವಾಲುಗಳು: ಪತ್ರಿಕಾ ದಿನಾಚರಣೆ ನಿಮಿತ್ತ ನಾಳೆ ವಿಶೇಷ ಉಪನ್ಯಾಸ

Upayuktha
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.2 ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್.ಯು.ಎಚ್. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದೈಜಿವರ್ಲ್ಡ್ ಸಂಪಾದಕ ವಾಲ್ಟರ್ ನಂದಳಿಕೆ ಅವರು "ಮಾಧ್ಯಮದ ಸವಾಲುಗಳು" ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.


ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆ‌ರ್ ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top