ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ: ಸಂಸದ ಕ್ಯಾ. ಬ್ರಿಜೇಶ್ ಚೌಟ

Chandrashekhara Kulamarva
0


ಮಂಗಳೂರು: ಮಳೆ ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ  ಜಿಲ್ಲೆಯ ಪ್ರತಿ ಮನೆ ಮನೆಗಳಲ್ಲೂ ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಭಿಯಾನ ನಡೆಸುವ ಅಗತ್ಯವಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.


ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್   ಚಿಕ್ಕಮಗಳೂರು ಇದರ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಮಳೆನೀರು ಕೊಯ್ಲು ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜನತೆ ಬೆಂಬಲಿಸುತ್ತಾರೆ. ಸಂಸದನಾಗಿ ಜಿಲ್ಲೆಯ ಅಭಿವೃದ್ದಿಯತ್ತ ಮಾತ್ರ ಗಮನ ಕೇಂದ್ರೀಕರಿಸಿದ್ದೇನೆ. ಕೇಂದ್ರ ಸರ್ಕಾರದ ಸೌರಶಕ್ತಿ ಬಳಕೆಯ ಸೂರ್ಯ ಘರ್ ಯೋಜನೆಯ ಪ್ರಯೋಜನವನ್ನು ಜನತೆ ಪಡೆಯಬೇಕು. ಈ ‌ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.


ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ  ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ‌ ಅಡ್ಕಸ್ಥಳ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಖಜಾಂಜಿ ಪುಷ್ಪರಾಜ್ ಬಿ.ಎನ್., ಅರಿವು ಕೇಂದ್ರದ ನಿರ್ದೇಶಕ ಡಾ.ಯು. ಪಿ. ಶಿವಾನಂದ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ನ ನಿರ್ದೇಶಕ ಮೈಕೆಲ್ ಬ್ಯಾಪ್ಟಿಸ್ಟ್, ಮನೋಜ್ ಸ್ಯಾಮ್ಯುಯೆಲ್ ಬ್ಯಾಪ್ಟಿಸ್ಟ್, ಲಿನ್‌ಫೋರ್ಡ್ ಪಿಂಟೊ, ರೋಟರಿ ಅಸಿಸ್ಟೆಂಟ್ ಗವರ್ನರ್ ಚೆನ್ನಗಿರಿ ಗೌಡ, ಸಹಾಯಕ ಗವರ್ನರ್ ರವಿಶಂಕರ್ ರಾವ್, ಜಿಲ್ಲಾ ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲ್ಬಾವಿ, ರೋಟರಿ ಕ್ಲಬ್ ಝೋನಲ್ ಲೆಫ್ಟಿನೆಂಟ್ ರವಿ ಜಲನ್, ಗೀತಾ ರೈ ಮುಂತಾದವರು ಉಪಸ್ಥಿತರಿದ್ದರು.


ಇದೇ ಸಂದರ್ಭ ಮಂಗಳೂರು ಪ್ರೆಸ್ ಕ್ಲಬ್ ನಿವೃತ್ತ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ರೋಟರಿ ಮಂಗಳೂರು ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top