ಸಾಹಿತ್ಯ ಜನ-ಮನ ಮುಟ್ಟುವಲ್ಲಿ ಶಕ್ತಿ ಮೀರಿ ಪ್ರಯತ್ನ: ಡಾ. ಎಂ.ಪಿ ಶ್ರೀನಾಥ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ದ.ಕ.ಜಿ ಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಇನ್ನಷ್ಟು ಸಾಹಿತ್ಯದ  ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಒಂದು ಮಾದರಿ ಜಿಲ್ಲೆಯನ್ನಾಗಿ ಮಾಡುವ ಬಗ್ಗೆ ಎಲ್ಲರ ಸಹಕಾರವನ್ನು ಕೋರಿದರು. ಹಿರಿಯ ಸಾಹಿತಿಗಳ ಅನುಭವ ನಮ್ಮ ಯುವಜನತೆ ಮತ್ತು ವಿದ್ಯಾರ್ಥಿಗಳಿಗೆ ಸಿಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸುವುದು ಎಂಬ ಅಭಿಪ್ರಾಯವನ್ನು ಮಾನ್ಯ ಅಧ್ಯಕ್ಷರು ವ್ಯಕ್ತಪಡಿಸಿದರು.


ಹಿರಿಯ ಯಕ್ಷಗಾನ ಸ್ತ್ರೀ ವೇಷಧಾರಿ ಪಾತಾಳ ವೆಂಕಟರಮಣ ಭಟ್ಟ ಅವರ ನಿಧನಕ್ಕೆ ಇದೇ ಸಂದರ್ಭದಲ್ಲಿ ನುಡಿನಮನ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಧ್ಯಕ್ಷರಾದ ಬಿ.ಐತ್ತಪ್ಪ ನಾಯ್ಕ್ ಮಾತನಾಡಿ, 5 ದಶಕಗಳಿಗಿಂತಲೂ ಹೆಚ್ಚುಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮೂಲಕ ದೊಡ್ಡ ಕೊಡುಗೆ ನೀಡಿದ್ದಾರೆ. ತೆಂಕು ಮತ್ತು ಬಡಗು ಎರಡು ತಿಟ್ಟಿನಲ್ಲಿ ಸೈ ಎನಿಸಿಕೊಂಡಿದ್ದಾರೆ. ಯಕ್ಷಗಾನ ಕ್ಷೇತ್ರದ ಧ್ರುವತಾರೆ ಎಂದು ಅವರ ಸಾಧನೆಯನ್ನು ಕೊಂಡಾಡಿದರು. ಪುತ್ತೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ ನಾಯಕ್ ಅವರು ಮಾತಾನಾಡಿ, ಪಾತಾಳ ವೆಂಕಟರಮಣ ಭಟ್ಟ ಅವರ ಹಾಸ್ಯ ಪ್ರಜ್ಞೆಯನ್ನು ನೆನಪಿಸಿದರು.


ಸಭೆಯ ಆರಂಭದಲ್ಲಿ ದ.ಕ.ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಹೆಚ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಕೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top