ದಿ ಬೆಸ್ಟ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ ಆಫ್ ದಿ ಇಯರ್ 2024-25 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

Upayuktha
0



ದಾವಣಗೆರೆ : ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ವೆಲ್ ಫೇರ್ ಅಸೋಸಿಯೇಷನ್ (ರಿ) ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಬಿ ಎಸ್ ಡಬ್ಲ್ಯೂ ಪದವಿ ಹಾಗೂ ಎಂ ಎಸ್ ಡಬ್ಲ್ಯೂ ಸ್ನಾತಕೋತ್ತರ ಪದವಿ ಮುಗಿಸಿ ಶಿಕ್ಷಣ, ಆರೋಗ್ಯ, ನ್ಯಾಯಾಂಗ, ಪೊಲೀಸ್, ಸಾಹಿತ್ಯ, ಆಡಳಿತ, ಪತ್ರಿಕಾ ರಂಗ, ಸಂಘ - ಸಂಸ್ಥೆ ಸೇರಿದಂತೆ ವಿವಿಧ ವೃತ್ತಿಪರ ಸಾಮಾಜಿಕ ಕ್ಷೇತ್ರದಲ್ಲಿ ಸುಮಾರು 10 ವರ್ಷಕ್ಕೂ ಹೆಚ್ಚು ಕಾಲ ಅನುಪಮ ಸೇವೆ ಸಲ್ಲಿಸಿದ ವೃತ್ತಿಪರ ಸಮಾಜಕಾರ್ಯಕರ್ತರು "ದಿ ಬೆಸ್ಟ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ ಆಫ್ ದಿ ಇಯರ್ 2024-25" ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಆದ್ದರಿಂದ ಆಸಕ್ತ ವೃತ್ತಿಪರ ಸಮಾಜ ಕಾರ್ಯಕರ್ತರು ಜುಲೈ 20 ರ ಒಳಗಾಗಿ 9739745816 ನಂಬರ್ ಗೆ ವಾಟ್ಸಪ್ಪ್ ಮುಖಾಂತರ ತಮ್ಮ ಸ್ವ-ವಿವರವನ್ನು ಕಳುಹಿಸಿ ಅರ್ಜಿ ಸಲ್ಲಿಸಬೇಕೆಂದು ಕರ್ನಾಟಕ ರಾಜ್ಯ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ವೆಲ್ ಫೇರ್ ಅಸೋಸಿಯೇಷನ್ (ರಿ) ನ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಸಂತೋಷ್ ಕುಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top