ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಮಂಡಳಿಯ ನೇತೃತ್ವದಲ್ಲಿ ನಡೆಯುವ “ಚಕ್ರವ್ಯೂಹ” “ಭಕ್ತಪ್ರಹ್ಲಾದ” ಪ್ರಸಂಗಗಳ ಉಚಿತ ಯಕ್ಷಗಾನ ಪ್ರದರ್ಶನ ಜುಲೈ 12 ರಂದು ಶನಿವಾರ ಸಂಜೆ 6-00ಕ್ಕೆ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಗಡಿಯಾರ ಗೋಪುರದ ಹತ್ತಿರವಿರುವ ಶ್ರೀ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವೈಶಿಷ್ಠ ಪೂರ್ಣ ಪೌರಾಣಿಕ ಯಕ್ಷಗಾನದ ಉದ್ಘಾಟನೆ ನಡೆಯಲಿದೆ ಎಂದು ಯಕ್ಷರಂಗದ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್ ಕುಮಾರ ಶೆಟ್ಟಿ ತಿಳಿಸಿದ್ದಾರೆ.
ಪೌರಾಣಿಕ ಕಥಾನಕದ ಈ ಸಮಾರಂಭದ ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಖ್ಯಾತ ಯಕ್ಷಗಾನ ಭಾಗವತರಾದ ರಸರಾಗ ಚಕ್ರವರ್ತಿ, ಜಿ. ರಾಘವೇಂದ್ರ ಮಯ್ಯಯರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಯಕ್ಷರಂಗದ ಅಧ್ಯಕ್ಷ ಮಲ್ಯಾಡಿ ಪ್ರಭಾಕರ ಶೆಟ್ಟಿ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ನಾಡಿನ ಖ್ಯಾತ ಯಕ್ಷರಂಗ ಕಲಾವಿದರಾದ ಕೋಡಿ ವಿಶ್ವನಾಥ ಗಾಣಿಗ, ಕಲಾಕುಂಚ, ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚದ ಅಧ್ಯಕ್ಷ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿಯವರು ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಯಕ್ಷರಂಗದ ಖಜಾಂಚಿ ನೀಲಾವರ ಭಾಸ್ಕರ ನಾಯಕ್ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ ಅಪ್ಪಟ ಕನ್ನಡ ಜನಪದ ಪುರಾತನ ಇತಿಹಾಸದ ಆರಾಧನಾ ಕಲೆ ಯಕ್ಷಗಾನವನ್ನು ವಾಣಿಜ್ಯ ನಗರಿ ದೇವನಗರಿಯಲ್ಲಿ ವೈಭವೀಕರಿಸಿದ ಈ ಯಕ್ಷಗಾನ ಪ್ರದರ್ಶನಕ್ಕೆ ಸರ್ವರೂ ಆಗಮಿಸಿ ಯಶಸ್ವಿಗೊಳಿಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ