ಧರ್ಮಸ್ಥಳ: ಜೈನಧರ್ಮದ ಹಿರಿಯ ವಿದ್ವಾಂಸರು ಹಾಗೂ ಅರ್ಚಕರಾದ ಸಿದ್ದಕಟ್ಟೆಯ ಚಂದ್ರನಾಥ ಇಂದ್ರರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಚಂದ್ರನಾಥ ಇಂದ್ರರು ಜೈನಧರ್ಮದ ಪೂಜೆಗಳು, ವಿಶೇಷ ಆರಾಧನೆಗಳು, ಪಂಚಕಲ್ಯಾಣ, ಪ್ರತಿಷ್ಠಾಮಹೋತ್ಸವ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳ ಬಗ್ಗೆ ಅಪಾರ ಅನುಭವ ಹೊಂದಿದ್ದರು. ಅವರು ಧರ್ಮಸ್ಥಳದಲ್ಲಿ ನಡೆದ ಭಗವಾನ್ ಬಾಹುಬಲಿ ಪ್ರತಿಷ್ಠಾಪನೆ, ಮಹಾಮಸ್ತಕಾಭಿಷೇಕ, ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ, ಪ್ರತಿಷ್ಠಾಮಹೋತ್ಸವ ಮೊದಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಹಕರಿಸಿದ್ದಾರೆ ಎಂದು ಸ್ಮರಿಸಿಕೊಂಡಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದು, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುವುದಾಗಿ ಹೆಗ್ಗಡೆಯವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ