ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (ಜೂನ್ 28) ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾದಕ ವಸ್ತುಗಳ ಬಳಕೆಯಿಂದ ಶರೀರ, ಆರೋಗ್ಯದ ಮೇಲೆ ಉಂಟಾಗುವ ಸಮಸ್ಯೆ ಕುರಿತು ಮಾಹಿತಿ ನೀಡಿದರು ಪುನರ್ವಸತಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾನ್ಸ್ಟೇಬಲ್ ಪ್ರಶಾಂತ ಉಪಸ್ಥಿತರಿದ್ದರು.
ಉಜಿರೆ ಶ್ರೀಧಾಮ ಪದೇಪೂರ್ವ ಕಾಲೇಜಿನ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶಾಮಿಲಾ ಅವರು, ಮಾದಕ ವ್ಯಸನಿಗಳನ್ನು ಆಪ್ತ ಸಮಾಲೋಚನೆ ಮೂಲಕ ವ್ಯಸನ ಮುಕ್ತ ಗೊಳಿಸಬಹುದಾದ ಬಗ್ಗೆ ಕುರಿತು ವಿವರಿಸಿದರು.
ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಕಾವ್ಯ ಸ್ವಾಗತಿಸಿ ಅಶ್ವಿನಿ ವಂದಿಸಿ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ