ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ ಪರಿಸರ ಜಾಗೃತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ಜರಗಿತು.
ಶ್ರೀಮತಿ ಜಯಂತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೋಟೆಕಾರ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಬೆಮಾರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಿ.ಪಿ.ಸಿ.ಆರ್.ಐ ಕಾಸರಗೋಡಿನ ನಿವೃತ್ತ ಅಧಿಕಾರಿ ದೇವಣ್ಣ ಇವರು, ವಿದ್ಯಾರ್ಥಿಗಳಾದ ನೀವು ಗಿಡ ನೆಟ್ಟು ಬೆಳೆಸಿ ಪರಿಸರವನ್ನು ಸಂರಕ್ಷಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯೆ ಶ್ರೀಮತಿ ಪ್ರೇಮಲತಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಶಶಿಕಾಲ ಸುವರ್ಣ, ಮೇಲ್ವಿಚಾರಕರಾದ ಅಭಿಷೇಕ್, ಶಾಲಾ ಹಿರಿಯ ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪರಿಸರ ದಿನಾಚರಣೆಯ ಅಂಗವಾಗಿ ರಸಪ್ರಶ್ನೆ ಹಾಗೂ ಬಿತ್ತಿಪತ್ರ ರಚನೆ ಸ್ಪರ್ಧೆ ಏರ್ಪಡಿಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ಗಿಡಗಳನ್ನು ಬಹುಮಾನವಾಗಿ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲಾ ವಿದ್ಯಾರ್ಥಿನಿಯರಿಂದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಶ್ರೀಮತಿ ಪ್ರಿಯಾ, ಕೃಷಿ ಮೇಲ್ವಿಚಾರಕಿ ಸ್ವಾಗತಿಸಿ ಅಧ್ಯಾಪಕರಾದ ಶ್ರೀಹರಿಪ್ರಸಾದ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ