ಮಂಗಳೂರು: ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮೂಡಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು.
ಬಂಟ್ವಾಳ ತಾಲೂಕಿನ ತುಂಬೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 'ಸಂತ ಆಗ್ನೆಸ್ ಸಮುದಾಯದತ್ತ ಘಟಕ' ಕಾರ್ಯಕ್ರಮದಡಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಗರೀಕರಣದಿಂದಾಗಿ ಈಗ ರಸ್ತೆ ಬದಿಯ ಮರಗಳನ್ನು ಕಡಿಯಲಾಗುತ್ತಿದೆ. ಹೀಗಾಗಿ ನಗರ ಪ್ರದೇಶಲ್ಲಿ ಹೆಚ್ಚು ಗಿಡಗಳನ್ನು ನೆಡುವ ಅಗತ್ಯವಿದೆ. ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮ ಸಂಯೋಜಕಿ ಡಾ. ಶೈಲಜಾ ರೈ, ಶ್ರೀಮತಿ ವಿನೀತಾ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಕುಂತಲಾ ಎಸ್ ಉಳ್ಳಾಲ್, ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳು, ತುಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ