ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಹೊಸ ವಲಯಗಳನ್ನು ಅನ್ವೇಷಿಸಿ: ವಿದ್ಯಾರ್ಥಿಗಳಿಗೆ ಕರೆ

Upayuktha
0



ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ‘ಸ್ಪೆಕ್ಟಾಕಲ್’ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.  


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ, “ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇtfrದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು.  


ನವಮಂಗಳೂರು ಬಂದರಿನ ಜೆಎಸ್‌ಡಬ್ಲ್ಯೂ ಕಂಟೇನರ್ ಟರ್ಮಿನಲ್‌ನೊಂದಿಗೆ ಅವರ ಅನುಭವವನ್ನು ಹಂಚಿಕೊಂಡ ಅವರು “ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ ಕೊರತೆಯಿಂದ ಅನಿವರ‍್ಯವಾಗಿ ಗುಜರಾತ್ ಮತ್ತು ತಮಿಳುನಾಡಿನ ಸಿಬ್ಬಂದಿಯನ್ನು ನೇಮಿಸಬೇಕಾಯಿತು. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ನವೀನ ಉದ್ಯಮಗಳಿಗೆ ಅನುಗುಣವಾಗಿ ರೂಪಿಸಿಕೊಳ್ಳಬೇಕು,” ಎಂದು ಅಭಿಪ್ರಾಯಪಟ್ಟರು.  


ಮುಖ್ಯವಾಗಿ ಈ ಉದ್ಯಮದಲ್ಲಿ ಕುತೂಹಲ, ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ಸ್ಪಷ್ಟ ಸಂವಹನ ಹಾಗೂ ತಂಡದ ಕಾರ್ಯತಂತ್ರ ಈ ಎಲ್ಲ ಕೌಶಲ್ಯಗಳು ನಿರ್ಣಾಯಕವಾಗಿರುತ್ತವೆ. ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು ಅನ್ವೇಷಿಸಬೇಕು, ವಿಶೇಷವಾಗಿ ಕೃತಕ ಬುದ್ಧಿಮತ್ತೆ ಈ ಉದ್ಯಮವನ್ನು ಹಿಂದೆಂದಿಗಿಂತಲೂ ವೇಗವಾಗಿ ಮರುರೂಪಿಸುತ್ತಿದೆ ಎಂದರು.


ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಕುರಿಯನ್, “ಸ್ಪೆಕ್ಟಾಕಲ್  ವೇದಿಕೆಯ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ಮತ್ತು ಸಾಮರ್ಥ್ಯಗಳನ್ನು ವಿಶ್ಲೇಷಿಸಿ ಪ್ರೊಫೈಲ್ ತಯಾರಿಸುವ ಕೆಲಸವಾಗಬೇಕು.  ಇದರಿಂದ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು  ಇಂತಹ ವೇದಿಕೆಗಳನ್ನು ಬಳಸಿಕೊಂಡು ಹೊಸ ಆಲೋಚನೆಗಳನ್ನು ರೂಪಿಸಬೇಕು. ಕಲಿಕೆಯ ಪ್ರತಿ ಕ್ಷಣವನ್ನು ಪಾಠವಾಗಿ ಪರಿವರ್ತಿಸುವ ಮನೋಭಾವ ಹೊಂದಿರಬೇಕು ಎಂದರು.


ಕುಶಿ ಶೆಟ್ಟಿ, ಮೊಹಮ್ಮದ್ ಸೌದ್, ಸಾಕ್ಷಿ, ಸುಮಿತ್ ಕುಂದರ್, ಮಾನಸ ಹಾಗೂ ಮೋಕ್ಷಿತ್ ವೇದಿಕೆಯ ನೂತನ ವಿದ್ಯಾರ್ಥಿ ಸಂಯೋಜಕರಾಗಿ ನಿಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಹಾಯಕ ಪ್ರಾಧ್ಯಾಪಕಿ ಸೋನಿ, ಸುಹಾಸ್ ಶೆಟ್ಟಿ ವಿದ್ಯಾರ್ಥಿ ಸಂಯೋಜಕರಾದ ದೀಪಕ್, ಮಾನಸ ಮತ್ತು ವೈಶಾಖ್ ಇದ್ದರು. ಸಪ್ತಶ್ರೀ ನಿರೂಪಿಸಿ, ಇಶಿಕಾ ಅಂಚನ್ ಸ್ವಾಗತಿಸಿ, ಅಫ್ತಾಬ್ ರಹ್ಮಾನ್ ಅತಿಥಿಯನ್ನು ಪರಿಚಯಿಸಿ, ರಶ್ಮಿ ಶೆಟ್ಟಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top