ಹಿರಿಯಡಕ: ಶಿಕ್ಷಣ ಅಂದರೆ ಕೇವಲ ಖಾಲಿ ಕೊಡಪಾನಗಳಿಗೆ ನೀರು ತುಂಬಿಸುವ ಕೆಲಸವಲ್ಲ ಗಳಿಸಿದ ಜ್ಞಾನವನ್ನು ವಾಸ್ತವಿಕ ಬದುಕಿನತ್ತ ತಿರುಗಿಸುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಕೇವಲ ಅಂಕಗಳಿಂದ ಅಳೆಯುವುದು ಸರಿಯಲ್ಲ. ಬದಲಾಗಿ ಅವರ ಸಮಗ್ರವಾದ ವ್ಯಕ್ತಿತ್ವವನ್ನು ಅಳೆಯುವುದೇ ನಿಜವಾದ ಮೌಲ್ಯಮಾಪನ. ವಿದ್ಯಾರ್ಥಿ ದಿಸೆಯಲ್ಲಿಯೇ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವಂತೆ ಸಹಕರಿಸುವುದು ಹೆತ್ತವರ ಮತ್ತು ಶಿಕ್ಷಕರ ಜವಾಬ್ದಾರಿಯೂ ಹೌದು. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳೆಸುವಲ್ಲಿ ಹಿರಿಯಡಕ ಸರಕಾರಿ ಪ.ಪೂ ಕಾಲೇಜು ಪರಿಪೂರ್ಣವಾದ ಪರಿಕರ ಪರಿಸರವನ್ನು ಮೈಗೂಡಿಸಿಕೊಂಡಿರುವ ವಿದ್ಯಾಸಂಸ್ಥೆ ಎಂದು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ಉಡುಪಿ ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.
ಅಮೃತ ಮಹೇೂತ್ಸವದ ಶುಭ ಹೊಸ್ತಿಲಲ್ಲಿರುವ ಹಿರಿಯಡಕ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಪದವಿ ಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸಮ್ಮಾನಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಭಟ್ಟ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಂಚಾಲಕ ಡಾ.ಎನ್. ಎಸ್. ಶೆಟ್ಟಿ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಬಿ.ಎಲ್. ವಿಶ್ವಾಸ್, ಉದ್ಯಮಿ ದೇವರಾಯ ನಾಯಕ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶರತ್ ಹಿರಿಯಡಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕಿ ವೀಣಾ ನಾಯಕ್ ಪ್ರತಿಜ್ಞಾ ವಿಧಿ ಬೇೂಧಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ತ್ರಿಶಾ ಸ್ವಾಗತಿಸಿದರು. ಉಪನ್ಯಾಸಕ ಮಹೇಶ್ ವಂದಿಸಿದರು. ರಾಜ್ಯಶಾಸ್ತ್ರ ಪ್ರಾಧ್ಯಾಪಕ ದೇವರಾಯ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ