ಭಾರೀ ಮಳೆ ಹಿನ್ನೆಲೆ: ದ.ಕ, ಕಾಸರಗೋಡು, ಕೊಡಗು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ

Upayuktha
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಜುಲೈ 17.07.2025 ರ ಗುರುವಾರದಂದು ರಜೆಯನ್ನು ಘೋಷಿಸಿದ್ದಾರೆ.


ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ನಾಳೆ (ಜು.17) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ 


ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ನಿರಂತರ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಜುಲೈ 21ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಉತ್ತಮ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. 21ರ ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 


ಮಲೆನಾಡು: ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಜುಲೈ 17ರಂದು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಜುಲೈ 21ರ ತನಕ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 


ಒಳನಾಡು: ಉತ್ತರ ಒಳನಾಡಿನ ಬೆಳಗಾವಿಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು. 

ಈಗಿನಂತೆ ಜುಲೈ 21ರ ತನಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


ಉತ್ತರ ಭಾರತದ ಉತ್ತರ ರಾಜಸ್ಥಾನ ಹಾಗೂ ಜಾರ್ಖಂಡ್ ನಲ್ಲಿ ತಲುಪಿರುವ ತಿರುವಿಕೆಯಿಂದ ಮುಂಗಾರು ಮೇಲೆ ಯಾವುದೇ ಪರಿಣಾಮಗಳಿಲ್ಲ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top