ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಮತ್ತು ಹನಿ ಇಬ್ಬನಿ- ಸಿಹಿ ಸಿಂಚನ ಬಹುಭಾಷಾ ಕವಿಗೋಷ್ಠಿ ಜು.13 ರಂದು ಬೆಳಗ್ಗೆ 9.30ಕ್ಕೆ ನಗರದ ಲಾಲ್ ಬಾಗ್ ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್ ನಲ್ಲಿ ನಡೆಯಲಿದೆ.
ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ನ ಜನರಲ್ ಮ್ಯಾನೇಜರ್, ಮಾಜಿ ಮೇಯರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಕವಿ, ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಇವರ ಅಧ್ಯಕ್ಷತೆಯಲ್ಲಿ ಬಹು ಭಾಷಾ ಕವಿಗೋಷ್ಠಿ ನಡೆಯಲಿದೆ ಎಂದು ಅಭಾಸಾಪ ಸಾಹಿತ್ಯ ಕೂಟ ಪ್ರಮುಖ್ ಗೀತಾ ಲಕ್ಷ್ಮೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ