ಕುಂದಾಪುರ: ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕ ಮತ್ತು ಕಾಜಾಪ ಕುಂದಾಪುರ ತಾಲೂಕು ಘಟಕದ ವತಿಯಿಂದ ವಿಕಾಸಕ್ಕಾಗಿ ಜಾನಪದ ಕಾರ್ಯಕ್ರಮ ಮತ್ತು ಕನ್ನಡದ ಗಾದೆ, ಒಗಟುಗಳ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭವು ರಾಮ್ ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರಿನಲ್ಲಿ ಜುಲೈ 21 ರಂದು ನಡೆಯಿತು.
ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ, ಜಾನಪದವು ಬಹಳಷ್ಟು ವಿಶಿಷ್ಟತೆ ಮತ್ತು ವೈವಿಧ್ಯದಿಂದ ಕೂಡಿದ್ದು, ಇಲ್ಲಿರುವ ಅಪಾರವಾದ ಜಾನಪದ ಸಂಪತ್ತನ್ನು ಉಳಿಸಿ ಬೆಳೆಸಬೇಕು.
ವಿದ್ಯಾಥಿ೯ಗಳಲ್ಲಿ ಜಾನಪದದ ಆಸಕ್ತಿಯನ್ನು ಬೆಳೆಸಲು ಈ ರೀತಿಯ ಕಾಯ೯ಕ್ರಮ ನಿರಂತರವಾಗಿ ನಡೆಯುತ್ತಿದೆ ಎಂದ ಅವರು, ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಹೌಂದರಾಯನ ಒಲಗ ಎಂಬ ಜಾನಪದ ಆಚರಣೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ ಗೌರವಾಧ್ಯಕ್ಷ ಸಾಮ್ರಾಟ್ ಶೆಟ್ಟಿ ವಿಜೇತ ವಿದ್ಯಾರ್ಥಿಗಳಿಗೆ ಬಹು ಮಾನ ವಿತರಿಸಿದರು.
ವೇದಿಕೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಗೋಪಾಲ್ ವಿಷ್ಣು ಭಟ್, ಕ.ಜಾ.ಪ ಜಿಲ್ಲಾ ಪ್ರ.ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು ಉಪಸ್ಥಿತರಿದ್ದರು.
ಕಜಾಪ ಕುಂದಾಪುರ ತಾಲೂಕು ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ತಾಲೂಕು ಸದಸ್ಯ ಶ್ರೀಧರ ಪುರಾಣಿಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡದ ಗಾದೆ ಮತ್ತು ಒಗಟುಗಳ ಸ್ಪರ್ಧೆಯಲ್ಲಿ ವಿಜೇತನಾದ ವಿದ್ಯಾರ್ಥಿಗಳಿಗೆ ನಗದು ಸಹಿತ ಬಹುಮಾನ ವಿತರಿಸಲಾಯಿತು. ಶಿಕ್ಷಕ ಸಂತೋಷ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ