ಮುಜುಂಗಾವು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ ಜು.12ರಂದು

Upayuktha
0



ಕುಂಬಳೆ: ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, 'ಕನ್ನಡದ ನಡಿಗೆ ಶಾಲೆಯ ಕಡೆಗೆ" ಶೈಕ್ಷಣಿಕ ಶಿಬಿರದ 3ನೇ ಕಾರ್ಯಕ್ರಮವು 2025 ಜು 12ರಂದು ಬೆಳಗ್ಗೆ 10ರಿಂದ ಕುಂಬಳೆ ಸಮೀಪದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ದೀಪ ಬೆಳಗಿಸಿ ಉದ್ಘಾಟಿಸುವರು. ಮುಜುಂಗಾವು ಶ್ರೀಭಾರತೀ ವಿದ್ಯಾಪೀಠ ಆಡಳಿತ ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸುವರು. ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಮುಖ್ಯ ಶಿಕ್ಷಕ ಶ್ಯಾಮ ಭಟ್ ದರ್ಭೆಮಾರ್ಗ, ಶಾಲೆಯ ಪಿಟಿಎ ಅಧ್ಯಕ್ಷ ಎಂ. ಉದಯ ಕುಮಾರ್ ಶುಭ ಹಾರೈಸುವರು.


ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ, ಶಿಕ್ಷಣ ತಜ್ಞ ವಿ.ಬಿ ಕುಳಮರ್ವ, ಸಾಹಿತಿ- ವ್ಯಂಗ್ಯಚಿತ್ರಗಾರ ವಿರಾಜ್ ಅಡೂರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಶಾಲೆಯ ಗ್ರಂಥಪಾಲಕಿ ವಿಜಯ ಸುಬ್ರಹ್ಮಣ್ಯ, ಸಂಘಟನೆಯ ಕಾರ್ಯದರ್ಶಿ ದೇವರಾಜ್ ಆಚಾರ್ಯ ಸೂರಂಬೈಲ್, ಶಿಕ್ಷಕಿ ಚಿತ್ರಕಲಾ ದೇವರಾಜ ಆಚಾರ್ಯ ಸೂರಂಬೈಲ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ವಿದ್ಯಾರ್ಥಿಗಳಾದ ಕನಿಹ, ಪೃಥ್ವಿ ಮೊದಲಾದವರು ಸಹಕರಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top