ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ ವಾಸುದೇವ ನಿಧನ

Upayuktha
0



ಮಂಗಳೂರು: ಕಾರ್ಕಳದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಅವರ ತಂದೆ ಎಂ. ಕೆ. ವಾಸುದೇವ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ಇಂದು (ಗುರುವಾರ-ಜು.17) ಮುಂಜಾನೆ ನಿಧನರಾಗಿದ್ದಾರೆ.


ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಆರ್‌.ಎಸ್‌.ಎಸ್‌.ನಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಮಾಜಿ ಸಚಿವ, ಶಾಸಕ ಸುನಿಲ್‌ ಕುಮಾರ್‌ ಹಾಗೂ ಓರ್ವ ಪುತ್ರಿಯನ್ನು ಆಗಲಿದ್ದಾರೆ.


ಅವರ ಪಾರ್ಥಿವ ಶರೀರವು ಅಪರಾಹ್ನ 1 ಗಂಟೆಗೆ ಮಣಿಪಾಲದಿಂದ ನಿಟ್ಟೆ ಗ್ರಾಮದ ಕಲಂಬಾಡಿಗೆ ತರಲಾಗುವುದು. ಸಂಜೆ 4 ಗಂಟೆಗೆ ಅಂತಿಮ ವಿಧಿವಿಧಾನಗಳು ಕುಟು೦ಬಸ್ಥರ ಉಪಸ್ಥಿತಿಯಲ್ಲಿ ನೆರವೇರಲಿದೆಂದು ಕುಟುಂಬ ಮೂಲಗಳು ತಿಳಿಸಿವೆ.



ಬಿ.ವೈ. ವಿಜಯೇಂದ್ರ ಸಂತಾಪ

ಬೆಂಗಳೂರು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ.ಸುನೀಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.


ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅವರು ಹಲವು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top