ಕಾಸರಗೋಡು: ಕಾಸರಗೋಡಿನ ಸಿರಿ ಬಾಗಿಲು ವೆಂಕಪ್ಪಯ್ಯ ಸಭಾಭವನದಲ್ಲಿ ನಡೆದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿ ಇದರ ಐದನೇ ಅಂತರ ರಾಜ್ಯ ಸಮ್ಮೇಳನದಲ್ಲಿ ಕಾರ್ಯಕ್ರಮದಲ್ಲಿ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಜರಗಿತು.
ಸಂಸ್ಥೆಯ 115ನೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಸಂಸ್ಥೆಯ ವತಿಯಿಂದ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು. ವೇದಿಕೆಯಲ್ಲಿ ರಾಮಕೃಷ್ಣಮಯ್ಯ, ಕೃಷ್ಣಮೂರ್ತಿ ಕುಲಕರ್ಣಿ, ಅಚ್ಚುತ ಭಟ್, ನರಸಿಂಹ ಬಲ್ಲಾಳ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ